ಯಾರಿಗೆ ಯಾರುಂಟು
ಯಾರಿಗೆ ಯಾರುಂಟು ಎರವಿನ ಸಂಸಾರ
ನೀರ ಮೇಲಣ ಗುಳ್ಳೆ ನಿಜವಲ್ಲ ಹರಿಯೇ || ಪಲ್ಲವಿ ||
ಬಾಯಾರಿತು ಎಂದು ಬಾವಿನೀರಿಗೆ ಪೋದೆ
ಬಾವಿಲಿ ಜಲ ಬತ್ತಿ ಬರಿದಾಯ್ತು ಹರಿಯೆ |
ಬಿಸಿಲು ಗಾಳಿಗಾಗಿ ಮರದ ನೆರಳಿಗೆ ಪೋದೆ
ಮರ ಬಗ್ಗಿ ಶಿರದ ಮೇಲೊರಗಿತೋ ಹರಿಯೆ || ಯಾರಿಗೆ ||
ಅಡವಿಯೊಳ್ಮನೆ ಮಾಡಿ ಗಿಡಕೆ ತೊಟ್ಟಿಲು ಕಟ್ಟೆ
ತೊಟ್ಟಿಲಿನ ಶಿಶು ಮಾಯವಾಯಿತು ಹರಿಯೆ |
ತಂದೆ ಶ್ರೀ ಪುರಂದರವಿಠಲ ನಾರಾಯಣ
ನಾ ಸಾಯೋ ಹೊತ್ತಿಗೆ ನೀ ಕಾಯೋ ಹರಿಯೆ || ಯಾರಿಗೆ ||
Comments
Post a Comment