ವಾರ ಬಂತಮ್ಮ
ವಾರ ಬಂತಮ್ಮ ಗುರುವಾರ ಬಂತಮ್ಮ
ರಾಯರ ನೆನೆಯಮ್ಮ ಗುರುರಾಯರ ನೆನೆಯಮ್ಮ ||ಪ||
ಸ್ಮರಣೆ ಮಾತ್ರದಲಿ ಕ್ಲೇಶ ಕಳೆದು ಸದ್ಗತಿಯ ಕೊಡುವನಮ್ಮ||ಅ ಪ||
ಯೋಗಿ ಬರುವನಮ್ಮ ಶುಭ ಯೋಗ ಬರುವುದಮ್ಮ
ರಾಘವೇಂದ್ರ ಗುರುರಾಯ ಬಂದು ಭವ ರೋಗ ಕಳೆವನಮ್ಮ||ವಾ||
ಮನವ ತೊಳೆಯಿರಮ್ಮ ಭಕ್ತಿಯ ಮಣೆಯ ಹಾಕಿರಮ್ಮ
ದ್ಯಾನದಿಂದ ಕರೆದಾಗ ಬಂದು ಒಳಗಣ್ಣ ತೆರೆವನಮ್ಮ||ವಾ||
ಕೋಪ ಅರಿಯನಮ್ಮ ಯಾರನು ದೂರ ತಳ್ಳನಮ್ಮ
ಪ್ರೀತಿ ಮಾತಿಗೆ ಸೋತು ಬರುವ ಮಗುವಂತೆ ಕಾಣಿರಮ್ಮ||ವಾ||
ಹಿಂದೆ ಬರುವನಮ್ಮ ರಾಯರ ನೆರಳಿನಂತೆ ಹನುಮ
ಹನುಮನಿದ್ಧೆಡೆ ರಾಮನಿದ್ದು ನಿಜ ಮುಕ್ತಿ ಕೊಡುವನಮ್ಮ||ವಾ||
Comments
Post a Comment