ಈತನೀಗ ವಾಸುದೇವನು

 

ಈತನೀಗ ವಾಸುದೇವನು, ಲೋಕದೊಡೆಯ
ಈತನೀಗ ವಾಸುದೇವನು                                            ।।ಪ॥

ಈತನೀಗ ವಾಸುದೇವ ಈ ಸಮಸ್ತ ಲೋಕದೊಡೆಯ
ದಾಸಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ       ।।ಅ.ಪ॥

ನರನ ಸುತನರಣ್ಯದಲಿ ಗಿರಿಯೊಳ್ನಿಂತು ತನ್ನ ರೋಷದಿ
ಶರಗಳನ್ನು ತೀಡುತಿಪ್ಪನ ಯೋಚಿಸಿ |
ಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನ
ಶಿರವನ್ನು ಛೇದಿಸಿದ ದೇವ ಕಾಣಿರೋ                             ।।ಈತನೀಗ।।

ಧನುಜೆಯಾಳ್ದನಣ್ಣನಯ್ಯನ ಪಿತನ ಮುoದೆ ಕೌರವೇಂದ್ರನ
ನನುಜೆಯಾಳಿದವನ ಶಿರವ ಕತ್ತರಿಸುತ 
ಅನುಜೆಯಾಳಿದವನ ಬೆಂಕಿ ಮುಟ್ಟದoತೆ ಕಾಯ್ದ
ರುಕ್ಮನನುಜೆಯಾಳಿದವನ ಮೂರ್ತಿಯನ್ನು ನೋಡಿರೋ           ।।ಈತನೀಗ।|

ಸೃಷ್ಟಿಕರ್ತಗೆ ಮಗನಾದವನಿಗಿಷ್ಟ ಭೂಷಣ ಅಶನವಾದನ
ಜ್ಯೇಷ್ಠಪುತ್ರಗೆ ವೈರಿ ತೊಡೆಯ ಛೇದಿಸೆಂದು ಬೋಧಿಸಿ |
ಕಷ್ಟವನ್ನು ಕಳೆದು ಭಕ್ತರಿಷ್ಟವನು ಕಾದ 
ಉತ್ಕೃಷ್ಟ ಮಹಿಮನಾದ ದೇವ ಕಾಣಿರೋ                            ।।ಈತನೀಗ।|

ಕ್ರೂರವಾದ ಫಣಿಪಬಾಣ ತರಣಿಜನು ನಿರೀಕ್ಷಿಸಲು
ವೀರನರನತ್ತ ಎಸುಗೆ ಬಪ್ಪುದನ್ನು ಈಕ್ಷಿಸಿ |
ಧಾರಿಣಿಯ ಪದದೊಳೌಕಿ ಚರಣಭಜಕ ನರನ ಕಾಯ್ದ
ಭಾರಕರ್ತನಾದ ದೇವನೀತ ಕಾಣಿರೋ                           ।।ಈತನೀಗ।|

ವ್ಯೋಮಕೇಶನಿಪ್ಪ ದೆಸೆಯ ಆಮಹಾ ಮಹಿಮೆಯುಳ್ಳ
ಸಾಮಜವನೇರಿ ಬರುವ ಶಕ್ತಿಯನೀಕ್ಷಿಸಿ |
ಪ್ರೇಮದಿಂದ ಉರವನೊಡ್ಡಿ ಡಿoಗರಿಗನ ಕಾಯ್ದಾ 
ಸಾರ್ವಭೌಮ ಬಾಡದಾದಿಕೇಶವನ್ನ ನೋಡಿರೋ                         ।।ಈತನೀಗ।| 

Comments

Popular Posts