ತಾರಕ್ಕ ಬಿಂದಿಗೆ
ತಾರಕ್ಕ ಬಿಂದಿಗೆ ನಾ ನೀರಿಗೆ ಹೋಗುವೆ ತಾರೇ ಬಿಂದಿಗೆಯ ||ಪ||
ಬಿಂದಿಗೆ ಒಡೆದರೆ ಒಂದೇ ಕಾಸು ತಾರೇ ಬಿಂದಿಗೆಯ ||ಅ.ಪ||
ರಾಮನಾಮವೆಂಬ ರಸವುಳ್ಳ ನೀರಿಗೆ ತಾರೇ ಬಿಂದಿಗೆಯ
ಕಾಮಿನಿಯರ ಕೂಡೆ ಏಕಾಂತವಾಡೆನು ತಾರೇ ಬಿಂದಿಗೆಯ ||ತಾರಕ್ಕ||
ಗೋವಿಂದ ಎಂಬುವ ಗುಣವುಳ್ಳ ನೀರಿಗೆ ತಾರೇ ಬಿಂದಿಗೆಯ
ಆವಾವ ಪರಿಯಲ್ಲಿ ಅಮೃತದ ನೀರಿಗೆ ತಾರೇ ಬಿಂದಿಗೆಯ ||ತಾರಕ್ಕ||
ಬಿಂದುಮಾಧವನ ಘಟ್ಟಕ್ಕೆ ಹೋಗುವೆ ತಾರೇ ಬಿಂದಿಗೆಯ
ಪುರಂದರ ವಿಠಲಗೆ ಅಭಿಷೇಕ ಮಾಡುವೆ ತಾರೇ ಬಿಂದಿಗೆಯ ||ತಾರಕ್ಕ||
Comments
Post a Comment