ಕೊಡು ಬೇಗ ದಿವ್ಯಮತಿ
ಕೊಡು ಬೇಗ ದಿವ್ಯಮತಿ, ಸರಸ್ವತಿ
ಕೊಡು ಬೇಗ ದಿವ್ಯಮತಿ ||ಪ||
ಮೃಡ ಹರಿಹರ ಮುಖರೊಡೆಯಳೆ ನಿನ್ನಯ
ಅಡಿಗೆರಗುವೆ ಬ್ರಹ್ಮನ ರಾಣಿ ||ಅ.ಪ||
ಇಂದಿರಾ ರಮಣನ ಹಿರಿಯ ಸೋಸಯು ನಿನು
ಬಂದೆನ್ನ ವದನದಿ ನಿಂದು ನಾಮವ ನುಡಿಸೆ ||ಕೊಡು||
ಅಖಿಲ ವಿದ್ಯಾಭಿಮಾನಿ ಅಜನ ಪಟ್ಟದರಾಣಿ
ಸುಖವಿತ್ತು ಪಾಲಿಸೆ ಸುಜನ ಶಿರೋಮಣಿ |
ಪತಿತ ಪಾವನೆ ನೀ ಗತಿಯೆಂದು ನಂಬಿದೆ
ಸತತ ಪುರಂದರ ವಿಠಲನ ತೋರೆ ||ಕೊಡು||
Comments
Post a Comment