ಇಂದು ನಿನ್ನ ಮೊರೆಯ ಹೊಕ್ಕೆ
ಇಂದು ನಿನ್ನ ಮೊರೆಯ ಹೊಕ್ಕೆ ವೆಂಕಟೇಶನೆ
ಎಂದಿಗಾದರೆನ್ನ ಕಾಯೊ ಶ್ರೀನಿವಾಸನೆ ||ಪ||
ಶೇಷಗಿರಿಯವಾಸ ಶ್ರೀಶ ದೋಷರಹಿತನೆ |
ಏಸು ದಿನಕು ನಿನ್ನ ಪಾದದಾಸನು ನಾನೆ |
ಕ್ಲೇಶಗೈಸದಿರು ಎನ್ನ ಸ್ವಾಮಿಯು ನೀನೆ ||ಇಂದು||
ಕಮಲನಯನ ಕಾಮಜನಕ ಕರುಣವಾರಿಧೇ |
ರಮೆಯನಾಳ್ವ ಕಮಲನಾಭ ಹೇ ದಯಾನಿಧೇ |
ಯಮನ ಪುರದಿ ಶಿಕ್ಷಿಸದಿರು ಪಾರ್ಥಸಾರಥೇ ||ಇಂದು||
ಉರಗಶಯನ ಸುರರಿಗೊಡೆಯ ಸಿರಿಯ ರಮಣನೆ |
ಶರಣಪಾಲ ಬಿರುದು ತೋರಿ ಪೊರೆವ ದೇವನೆ |
ಕರುಣಿಸೆನಗೆ ಮುಕುತಿಯ ಪುರಂದರವಿಠಲನೆ ||ಇಂದು||
Comments
Post a Comment